ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿರವರು ಮಹಾಲಕ್ಷ್ಮೀಪುರಂ, ಜೆ.ಸಿ.ನಗರ ಮತ್ತು ಜೈ ಮಾರುತಿ ಮಂದಿರ ಪ್ರದೇಶಗಳಲ್ಲಿ ಮನೆ, ಮನೆಗೆ ತೆರಳಿ ಮತಯಾಚನೆ ಮಾಡಿದರು, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಗೌಡರವರು ಸಾತ್ ನೀಡಿದರು.
ಕಾಂಗ್ರೆಸ್ ಪಕ್ಷದ ಚುನಾವಣೆ ನಾಡಿನ ಜನರ ಹಿತಕ್ಕಾಗಿ ಘೋಷಣೆಯಾದ ಯೋಜನೆಗಳ ಗ್ಯಾರಂಟಿ ಕಾರ್ಡ್ ಗಳನ್ನು ಮನೆ, ಮನೆಗೆ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಅಭ್ಯರ್ಥಿ ಎಸ್.ಕೇಶವಮೂರ್ತಿರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು,ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ ನಾಡಿನ ಜನರ ಹಿತಕ್ಕಾಗಿ ಐದು ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ.
200ಯೂನಿಟ್ ವಿದ್ಯುತ್ ಉಚಿತ, ಮನೆಯ ಗೃಹಿಣಿಗೆ 2000ಸಹಾಯಧನ, ಪ್ರತಿ ವ್ಯಕ್ತಿಗೆ 10ಕೆ.ಜಿ.ಅಕ್ಕಿ, ನಿರುದ್ಯೋಗ ಭತ್ಯೆ, ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಸೌಲಭ್ಯ.
ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರ ನವ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.
ಜನರ ಆಶಯದಂತೆ ಮೂಲಭೂತ ಸೌಲಭ್ಯ ಒದಗಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ.
ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ, ಮತದಾರರೆ ಸ್ವಯಂ ಪೇರಿತರಾಗಿ ನಮ್ಮ ಬೆಂಬಲಕ್ಕೆ ಬರುತ್ತಿದ್ದಾರೆ.
ಹಣ ಬಲ-ಜನಬಲದ ನಡುವೆ ಹೋರಾಟ, ಜನ ಬಲ ಇರುವ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳಿಂದ ಜಯಗಳಿಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರುಗಳಾದ ಕೆ.ಶಿವಕುಮಾರ್,ಶಿವಕುಮಾರ್, ವಾರ್ಡ್ ಅಧ್ಯಕ್ಷರಾದ ಬಾಲಕೃಷ್ಣ, ಮಹಿಳಾ ವಾರ್ಡ್ ಪ್ರೇಮ,ಯುವ ಕಾಂಗ್ರೆಸ್ ಮೋಹನ್, ಪಾರ್ವತಿ,ಸುರೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.