ಕೇರಳದ ಎರ್ನಾಕುಲಂನಲ್ಲಿ ಕೊಚ್ಚಿನ್ ಕನ್ನಡ ಸಂಸ್ಕೃತಿ ಉತ್ಸವ ಮತ್ತು ಪತ್ರಕರ್ತರಿಗೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರು ಉದ್ಘಾಟಿಸಿದರು.
ಕೊಚ್ಚಿನ್ ಮೇಯರ್ ಎಂ ಅನಿಲ್ ಕುಮಾರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕನ್ನಡ ಕೊಚ್ಚಿನ್ ಸಂಘದ ಅಧ್ಯಕ್ಷ ಶ್ರೀನಿವಾಸರಾವ್, ಧಾರ್ಮಿಕ ಮುಖಂಡ ಅರಿಬೈಲು ಗೋಪಾಲ ಶೆಟ್ಟಿ, ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ ಮತ್ತಿತರರು ಹಾಜರಿದ್ದರು .