Friday, June 2, 2023
Homeಇದೀಗ ಬಂದ ತಾಜಾ ಸುದ್ದಿಜನ ಬದಲಾವಣೆ ಬಯಸಿದ್ದಾರೆ: ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಎಂದು ನಿರ್ಧರಿಸಿದ್ದಾರೆ-ಎಸ್.ಕೇಶವಮೂರ್ತಿ

ಜನ ಬದಲಾವಣೆ ಬಯಸಿದ್ದಾರೆ: ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಎಂದು ನಿರ್ಧರಿಸಿದ್ದಾರೆ-ಎಸ್.ಕೇಶವಮೂರ್ತಿ

ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿರವರು ಮಹಾಲಕ್ಷ್ಮೀಪುರ ವಾರ್ಡ್ ನಲ್ಲಿ ಮನೆ, ಮನೆಗೆ ತೆರಳಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ಪಕ್ಷದ ಸಾಧನೆಗಳು ಮತ್ತು ಎರಡು ಬಾರಿ ಪಾಲಿಕೆ ಸದಸ್ಯರಾಗಿ ಮಾಡಿರುವ ಅಭಿವೃದ್ದಿ ಸಾಧನೆಗಳ ಪುಸ್ತಕಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಎಸ್.ಕೇಶವಮೂರ್ತಿರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ನಡೆಸಿದ ಬೃಹತ್ ರೋಡ್ ಶೋ ಕಾಂಗ್ರೆಸ್ ಪಕ್ಷಕ್ಕೆ ಆತ್ಮವಿಶ್ವಾಸದ ಜೊತೆಯಲ್ಲಿ ಆನೆಬಲ ಸಿಕ್ಕಂತೆಯಾಗಿದೆ.

ನಮ್ಮ ಕ್ಷೇತ್ರದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ ಮತ್ತು ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಹೆಸರಿನಲ್ಲಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ.

ರಾಜ್ಯ ಸರ್ಕಾರ ಕಾಮಗಾರಿಗಳಲ್ಲಿ ಶೇಕಡ 40% ಪರ್ಸೆಂಟ್ ಕಮಿಷನ್ ಲೂಟಿ ಮಾಡಿದ್ದಾರೆ.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬಂತೆ ಎಲ್ಲ ವರ್ಗ, ಧರ್ಮದವರು ಅಭಿವೃದ್ದಿಗೆ ಕರೆದುಕೊಂಡು ಹೋಗುವ, ಬಡವರ, ದೀನದಲಿತರ ಪರ ಹೋರಾಟ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತೇವೆ ಎಂದು ಸ್ವಯಂಪೇರಿತರಾಗಿ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಪಾದಯಾತ್ರೆ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments