Tuesday, June 6, 2023
Homeಇದೀಗ ಬಂದ ತಾಜಾ ಸುದ್ದಿಕ್ಷೇತ್ರದಲ್ಲಿ ಸಚಿವ ಸುರೇಶ್ ಕುಮಾರ್ ಪರವಾಗಿ ಕೆ ಗೋಪಾಲಯ್ಯ ಭರ್ಜರಿ ರೋಡ್ ಶೋ...

ಕ್ಷೇತ್ರದಲ್ಲಿ ಸಚಿವ ಸುರೇಶ್ ಕುಮಾರ್ ಪರವಾಗಿ ಕೆ ಗೋಪಾಲಯ್ಯ ಭರ್ಜರಿ ರೋಡ್ ಶೋ ಮೂಲಕ ಮತ ಪ್ರಚಾರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಸುರೇಶ್ ಕುಮಾರ್ ಪರವಾಗಿ ಶಿವನಹಳ್ಳಿ ನಗರದ ಸುತ್ತಮುತ್ತಲಿನ ಪ್ರಮುಖ ಸರ್ಕಲ್ ಗಳಲ್ಲಿ ಕೆ ಗೋಪಾಲಯ್ಯ ರವರು ರೋಡ್ ಶೋ ನಡೆಸಿ ಭರ್ಜರಿ ಮತ ಪ್ರಚಾರ ಮಾಡಿ ಮತಯಾಚಿಸಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಭಾರತೀಯ ಜನತಾ ಪಕ್ಷ ಸರ್ಕಾರ ಬದ್ಧವಾಗಿದ್ದು, ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುರೇಶ್ ಕುಮಾರ್ ಅವರನ್ನು ಅತಿಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಕೊಟ್ಟರೆ ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.

ಕ್ಷೇತ್ರದ ಅಭಿವೃದ್ಧಿಗೆ ನಾನು ಪಣ ತೊಟ್ಟಿದ್ದು ನನಗೊಂದು ಅವಕಾಶ ನೀಡುವ ಮೂಲಕ ನಿಮ್ಮಗಳ ಸೇವೆಗೆ ಅನುವು ಮಾಡಿಕೊಡಬೇಕೆಂದು ಮತದಾರರಲ್ಲಿ ಕೋರಿದರು.

ಇದೇ ಸಂದರ್ಭದಲ್ಲಿ ಓಬಿಸಿ ಅಧ್ಯಕ್ಷ ನೆ.ಲ ನರೇಂದ್ರಬಾಬು, ಮಾಜಿ ಮಹಾ ಪಾಲಿಕೆ ಸದಸ್ಯ ಮಂಜುನಾಥ್, ಬಿಜೆಪಿ ಮುಖಂಡರಾದ ಗಂಗಾಧರ್, ಹಾಗೂ ಸ್ಥಳೀಯ ಬಿಜೆಪಿ ಮುಖಂಡರುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments