Saturday, June 3, 2023
Homeಇದೀಗ ಬಂದ ತಾಜಾ ಸುದ್ದಿಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ಪರ ಶ್ರೀನಿವಾಸ ನಗರದಲ್ಲಿ ಪ್ರಚಾರ: ಕುಮಾರ ಸ್ವಾಮಿ ಮುಖ್ಯಮಂತ್ರಿ ಖಚಿತ...

ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ಪರ ಶ್ರೀನಿವಾಸ ನಗರದಲ್ಲಿ ಪ್ರಚಾರ: ಕುಮಾರ ಸ್ವಾಮಿ ಮುಖ್ಯಮಂತ್ರಿ ಖಚಿತ – ಡಾ.ಬಿ.ಎಂ. ಉಮೇಶ್ ಕುಮಾರ್

ಬೆಂಗಳೂರು, ಮೇ, 8; ಈ ಬಾರಿ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಬದಲಾವಣೆ ಬಯಸಿದ್ದು, ಜಾತ್ಯತೀತ ಜನತಾದಳದತ್ತ ಒಲವು ತೋರಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಡಾ.ಬಿ.ಎಂ. ಉಮೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀನಿವಾಸನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ಅವರಿಗೆ ಬೃಹತ್ ಪಂಚ ಫಲದ ಹಾರ ಹಾಕಿ ಅದ್ದೂರಿಯಾಗಿ ಬರಮಾಡಿಕೊಂಡು ಬಿರುಸಿನ ಪ್ರಚಾರ ನಡೆಸಿದರು.

ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಪ್ರಚಾರ ಕೈಗೊಂಡ ಅವರು, ಈ ಬಾರಿ ಜೆಡಿಎಸ್ ಗೆ ರಾಜ್ಯದಲ್ಲಿ ಉತ್ತಮ ವಾತಾವಣ ವ್ಯಕ್ತವಾಗಿದೆ. ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ. ಅರಮನೆ ಶಂಕರ್ ವಿಧಾನಸಭೆಗೆ ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಕೆ ಬಾಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments