ಬೆಂಗಳೂರು: ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ, ಪಿಯುಸಿ ಮತ್ತು ಪದವಿಯಲ್ಲಿ 2023 ಸಾಲಿನಲ್ಲಿ ಶೇ.85 ರಷ್ಟು ಅಂಕ ಪಡೆದು ಉತ್ತೀರ್ಣರಾದ ಮಡಿವಾಳ ಸಮಾಜದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಜೊತೆಗೆ ಅಂಕಪಟ್ಟಿ, ವರ್ಗಾವಣೆಯ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಲು ಜೂನ್.15 ಕೊನೆಯ ದಿನವಾಗಿದೆ. ಅರ್ಜಿಯನ್ನು ಪಿ.134, 4ನೇ ಎ ಕ್ರಾಸ್, ಅಂಕಾಳ ಪರಮೇಶ್ವರಿ ದೇವಸ್ಥಾನ ರಸ್ತೆ, ನಾಗಪ್ಪ ಬ್ಲಾಕ್, ಬೆಂಗಳೂರು-560021 ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಘದ ರಾಜ್ಯಾಧ್ಯಕ್ಷ ದೀಪಕ್ ವಿ .6364 313 555 ನ್ನು ಹಾಗು ಪ್ರಧಾನ ಕಾರ್ಯದರ್ಶಿ ಕೆ. ಮಲ್ಲೇಶ್ 9980195359 ಸಂಪರ್ಕಿಸಬಹುದು.