Tuesday, June 6, 2023
Homeರಾಜಕೀಯಕನ್ನಡ ರಥಕ್ಕೆ ಅದ್ದೂರಿ ಸ್ವಾಗತ ನೀಡಿ: ಜವರೇಗೌಡ ಟಿ.

ಕನ್ನಡ ರಥಕ್ಕೆ ಅದ್ದೂರಿ ಸ್ವಾಗತ ನೀಡಿ: ಜವರೇಗೌಡ ಟಿ.

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ರಾಜ್ಯಾದ್ಯಂತ ಜಾಥ ಕೈಗೊಳ್ಳಲಿದೆ. ರಾಮನಗರ ಜಿಲ್ಲೆಗೂ ಸಹ ಆಗಮಿಸಲಿದ್ದು, ಅದಕ್ಕೆ ಅದ್ದೂರಿ ಸ್ವಾಗತ ನೀಡುವಂತೆ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ. ಅವರು ತಿಳಿಸಿದರು.
ಅವರು ಡಿ. ೧೫ರ ಗುರುವಾರ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನ್ನಡ ಜ್ಯೋತಿ ಯನ್ನು ಹೊತ್ತ ಕನ್ನಡ ರಥದ ಜಾಥ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ರಥವು ಡಿ. ೧೭ರಂದು ಬೆಳಿಗ್ಗೆ ೧೧ ಗಂಟೆಗೆ ಬಿಡದಿಗೆ ಆಗಮಿಸಲಿದೆ. ಕನ್ನಡ ರಥ ಆಗಮಿಸಿದಾಗ ಕನ್ನಡ ರಥಕ್ಕೆ ಅದ್ದೂರಿ ಸ್ವಾಗತ ನೀಡಿ ಕಲಾತಂಡಗಳೊಂದಿಗೆ ಬಿಡದಿಯ ಪ್ರಮುಖ ಸ್ಥಳಗಳಲ್ಲಿ ಮೆರವಣಿಗೆ ಮಾಡಿ ನಂತರ ಅಂದು ಮಧ್ಯಾಹ್ನ ೧.೩೦ಕ್ಕೆ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದೆ ಎಂದರು.
ರಾಮನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ನಂತರ ಡಿ. ೧೮ರಂದು ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಚನ್ನಪಟ್ಟಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಜನತೆ ಭಾಗವಹಿಸಿ ಕನ್ನಡ ರಥದ ಜಾಥವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಮನಗರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಪಾರ್ವತಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು ಟಿ.ಜಿ. ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments