ಭಾನುವಾರ ವೀರವನಿತೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಓಬವ್ವನವರ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ 80 ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಒನಕೆ ಓಬವ್ವನ ಜೀವನ ಸಾಧನೆಗಳ ಸಂಶೋಧನೆಗಾಗಿ ವಿಶ್ವವಿದ್ಯಾಲಯಲದಲ್ಲಿ ಅಧ್ಯಯನ ಪೀಠ ರಚಿಸಲಾಗುವುದು ಎಂದು ಭರವಸೆ ನೀಡಿದರು.

ಕರ್ತವ್ಯನಿಷ್ಠೆ, ದೇಶಪ್ರೇಮ, ತ್ಯಾಗ ಮನೋಭಾವಗಳು ತಮ್ಮ ಕುಲಸಮುದಾಯದಿಂದ ಬಂದಿದೆ. ಒನಕೆ ಓಬವ್ವನ ತ್ಯಾಗ ಆದರ್ಶಗಳು ಇಂದಿನ ಯುವಪೀಳಿಗೆಗೆ ತಿಳಿಸಬೇಕೆಂಬ ಉದ್ದೇಶದಿಂದ ಒನಕೆ ಓಬವ್ವನ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದರು.

ಶಿಕ್ಷಣ ಮತ್ತು ಉದ್ಯೋಗಕ್ಕೆ ಪ್ರಾಶಸ್ತ್ಯ

ಕರ್ನಾಟಕದ ಬೆಳವಣಿಗೆಯಲ್ಲಿ ಎಲ್ಲ ಸಮುದಾಯದ ಕೊಡುಗೆ ಇದೆ. ಸಮುದಾಯಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸರ್ಕಾರ ಒತ್ತು ನೀಡುತ್ತದೆ. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ 100 ಅಂಬೇಡ್ಕರ್ ಹಾಸ್ಟೆಲ್ ಗಳು, 50 ಕನಕದಾಸ ಹಾಸ್ಟೆಲ್, ಉದ್ಯೋಗ ಸೃಷ್ಟಿಯಲ್ಲಿ ರಾಜ್ಯದ 224 ಕ್ಷೇತ್ರದಲ್ಲಿ 100 ಯುವಕರಿಗೆ ಸ್ವಯಂಉದ್ಯೋಗ ಯೋಜನೆ ಜಾರಿ ಮಾಡಲಾಗುತ್ತಿದೆ. ದುರ್ಬಲ ವರ್ಗಗಳ ಶಿಕ್ಷಣ, ಉದ್ಯೋಗ ಹಾಗೂ ಸಬಲೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಬಸವ ನಾಗದೇವ ಸ್ವಾಮೀಜಿ, ಜ್ಞಾನ ಪ್ರಕಾಶ್ ಸ್ವಾಮೀಜಿ, ವಿಜಯ ಮಹಾಂತೇಶ ಸ್ವಾಮೀಜಿ, ಬಸವಲಿಂಗ ಮೂರ್ತಿ ಸ್ವಾಮೀಜಿ, ಶಾಸಕರಾದ ನೆಹರು ಒಲೆಕರ್, ತಿಪ್ಪಾರೆಡ್ಡಿ, ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಪೂರ್ಣಿಮಾ, ಎನ್. ಮಹೇಶ್, ಚಲವಾದಿ ನಾರಾಯಣ ಸ್ವಾಮಿ, ನವೀನ್, ನಿವೃತ್ತ ಐ.ಎ. ಎಸ್ ಅಧಿಕಾರಿ ಶಿವರಾಮ್, ಮಾಜಿ ಸಚಿವೆ ಮೋಟಮ್ಮ, ಮೊದಲಾದವರು ಉಪಸ್ಥಿತರಿದ್ದರು.