ಮೈಸೂರು: ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಪುತ್ರಿ ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಘಟನೆ ನಡೆದಿದೆ.
ಗಿರಿಜಾಲಕ್ಷ್ಮೀ ಟೆರೇಷಿಯನ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಮನೆಯವರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಿರಿಜಾಲಕ್ಷ್ಮೀಯನ್ನ ಗೋಪಾಲಗೌಡ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಗಿರಿಜಾಲಕ್ಷ್ಮೀ ಪ್ರಾಣ ಹೋಗಿತ್ತು. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐದು ದಿನಗಳ ಹಿಂದಷ್ಟೇ ಗೋಪಿನಾಥ್‌ರ ಅಣ್ಣ ವಿಧಿವಶರಾಗಿದ್ದರು.