ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ಸತ್ಯ ಗಣಪತಿ ಮೂರ್ತಿಯ ವಿಸರ್ಜನಾ ಮಹೋತ್ಸವ ಜರುಗುವುದರಿಂದ ಡಿಸೆಂಬರ್ ೨೦ರ ರಾತ್ರಿ ೧೨ ಗಂಟೆಯವರೆಗೆ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ. ವಿಸರ್ಜನಾ ಮಹೋತ್ಸವದ ಅಂಗವಾಗಿ ವಿವಿಧ ಜಾನಪದ ಕಲಾ ತಂಡ, ನೃತ್ಯ ತಂಡಗಳೊಂದಿಗೆ ತುರುವೇಕೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ಸತ್ಯ ಗಣಪತಿ ಮೂರ್ತಿಯ ಮೆರವಣಿಗೆ ಮಾಡಲಾಗುವುದು. ಮೆರವಣಿಗೆಯಲ್ಲಿ ಸುಮಾರು ೧೫ಸಾವಿರ ಭಕ್ತಾದಿಗಳು ಸೇರುವ ನಿರೀಕ್ಷೆಯಿದ್ದು, ಶಾಂತಿ ಕಾಪಾಡುವ ಉದ್ದೇಶದಿಂದ ತುರುವೇಕೆರೆ ಪಟ್ಟಣದ ಸುತ್ತಮುತ್ತ ೫ ಕಿ.ಮೀ. ವ್ಯಾಪ್ತಿಯಲ್ಲಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾವಧಿಯಲ್ಲಿ ವೈನ್ ಸ್ಟೋರ್, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚಿ ಮದ್ಯ ಮಾರಾಟವನ್ನು ಮಾಡುವಂತಿಲ್ಲ ಎಂದು ಅವರು ಸೂಚನೆ ನೀಡಿದ್ದಾರೆ.
ತುರುವೇಕೆರೆ ಶ್ರೀ ಸತ್ಯ ಗಣಪತಿ ಮೂರ್ತಿ ವಿಸರ್ಜನೆ: ಮದ್ಯ ಮಾರಾಟ ನಿಷೇಧ
RELATED ARTICLES