ಬೆಳಗಾವಿ:ಪತ್ರಿಕಾ ವಿತರಕರ ಬೇಡಿಕೆಗಳಿಗೆ ವಾರ್ತಾಧಿಕಾರಿಗಳು ಸ್ಪಂಧಿಸಿದ್ದಾರೆ.
ಬೆಳಗಾವಿ ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಪ್ರತಾಪ್ ಬೋಸ್ಲೆ, ನಿರ್ದೇಶಕರುಗಳಾದದೀಪಕ್ ರಾಜಗೋಳಗಕರ್, ನಾಮದೇವ ಕಳ್ಳಿಗುಡ್ಡ ನೇತೃತ್ವದ ನಿಯೋಗ ವಾರ್ತಾ ಇಲಾಖೆಯ ಹಿರಿಯ ಜಂಟಿ ನಿರ್ದೇಶಕರುಗಳಾದ ಮುರುಳೀಧರ ಮತ್ತು ಪುಟ್ಟಸ್ವಾಮಯ್ಯ ಅವರನ್ನು ಭೇಟಿ ಮಾಡಿತು.
ಮಾಧ್ಯಮ ಅಕಾಡೆಮಿ ಮೂಲಕ ಪತ್ರಿಕಾ ವಿತರಕರ ಸಮಸ್ಯೆಗಳ ಬಗ್ಗೆ ವರದಿ ತರಿಸಿ, ಕಾರ್ಮಿಕ ಇಲಾಖೆಯ ಮೂಲಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕೆಯುಡಬ್ಲ್ಯೂಜೆ ಅಧ್ಯಕ್ಷರಾದತಗಡೂರು ಅವರಿಗೆ ಮನವಿ
ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ಅಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಭೇಟಿ ಮಾಡಿದ ನಿಯೋಗ ಪತ್ರಿಕಾ ವಿತರಕರ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿತು. ಇದೇ ಸಂದರ್ಭದಲ್ಲಿ ಇಲ್ಲಿಯ ತನಕ ಏನೇನು ಬೆಳವಣಿಗೆ ಆಗಿದೆ ಎನ್ನುವುದನ್ನು ವಿವರಿಸಿದರು.ಪತ್ರಿಕಾ ವಿತರಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ ಅವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಸರ್ಕಾರದ ಗಮನ ಸೆಳೆಯಲು ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
ವಿತರಕರ ಪರವಾಗಿ ಹೋರಾಟ ಮಾಡಿ, ಪತ್ರಿಕೆ ಹಂಚುವ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಿದ್ದ ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂ ನೆರವು ಕೊಡಿಸಿದ್ದಕ್ಕೆ ತಗಡೂರು ಅವರಿಗೆ ವಿತರಕರು ಧನ್ಯವಾದ ಸಲ್ಲಿಸಿದರು.