ಬೆಳಗಾವಿ: ಒಕ್ಕಲಿಗರ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಒಕ್ಕಲಿಗ ಸಚಿವರು, ಶಾಸಕರ ನಿಯೋಗದಿಂದ ಮನವಿ ಸಲ್ಲಿಸಲಾಯಿತು.
ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಭಾಗವಹಿಸಿದರು.
ನಿಯೋಗದಲ್ಲಿ ಸಚಿವರಾದ ಆರ್ ಅಶೋಕ್, ಡಾ.ಸಿ.ಎನ್
ಅಶ್ವತ್ಥನಾರಾಯಣ್, ಆರಗ ಜ್ಞಾನೇಂದ್ರ, ಕೆ.ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಸುಧಾಕರ್, ಶಾಸಕರಾದ ಕೃಷ್ಣಪ್ಪ, ಕೆ.ಜಿ ಬೋಪಯ್ಯ, ಸುಕುಮಾರ ಶೆಟ್ಟಿ, ಡಾ.ರಾಜೇಶ ಗೌಡ, ಮಸಾಲಾ ಜಯರಾಂ, ತುಳಸಿ ಮುನಿರಾಜುಗೌಡ, ಸತೀಶ್ ರೆಡ್ಡಿ, ಎಂ ಕೆ ಪ್ರಾಣೇಶ್, ವೈ.ಎ. ನಾರಾಯಣಸ್ವಾಮಿ, ಜೀವರಾಜ್, ಭಾರತಿ ಶೆಟ್ಟಿ, ಚಿದಾನಂದಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.