Tuesday, June 6, 2023
Homeರಾಜಕೀಯವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವವಾದ ಸಾಧನೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ

ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವವಾದ ಸಾಧನೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ

ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರ: ಶಂಕರಮಠ ವಾರ್ಡ್, ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ಪಂದನ ಕ್ರೀಡಾ ಸಾಂಸ್ಕೃತಿಕ ವೇದಿಕೆ ವತಿಯಿಂದ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಕಾಂಕ್ಷಿ ಡಾ||ನಾರಾಯಣಸ್ವಾಮಿರವರು, ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜು ರವರು, ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎಸ್.ಕೇಶವಮೂರ್ತಿರವರು ದೀಪಾ ಬೆಳಗಿಸಿ ಉದ್ಘಾಟನೆ ಮಾಡಿದರು.

ಡಾ||ನಾರಾಯಣಸ್ವಾಮಿ ರವರು ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪರ ಸದಾ ಶ್ರಮಿಸುವ ,ದುಡಿಯುವ ಪಕ್ಷವಾಗಿದೆ.
ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಶ್ರಮಿಕವರ್ಗ ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ.

ವೈದ್ಯಕೀಯ ತಪಾಸಣೆ, ಪರೀಕ್ಷೆ ಮಾಡಿಸಿಕೊಳ್ಳಲು ಆರ್ಥಿಕವಾಗಿ ಸಬಲರಾಗಿ ಇರುವುದಿಲ್ಲ, ಅವರ ಆರೋಗ್ಯ ರಕ್ಷಣೆಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಹೃದಯ, ನೇತ್ರಾ,ಹರ್ನಿಯಾ, ಇನ್ನಿತರ ಶಸ್ತ್ರಚಿಕಿತ್ಯೆಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ನಮ್ಮ ಆಸ್ಪತ್ರೆಯಲ್ಲಿ ಮಾಡಲಾಗುವುದು.

ಮುಂದಿನ ದಿನಗಳಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು, ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಲ್ತ್ ಇನ್ಯೂರೆನ್ಸ್ ಉಚಿತವಾಗಿ ಮಾಡಿಕೊಡಲಾಗುವುದು ಎಂದು ಹೇಳಿದರು.

ಎಮ್.ಶಿವರಾಜು ರವರು ಮಾತನಾಡಿ ಇಂದು ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವವಾದ ಸಾಧನೆ ಮಾಡಿದ್ದರೆ ಅದು ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಬಹುದು.

ಕಾಂಗ್ರೆಸ್ ಪಕ್ಷದ ಆಡಳಿತ ಅವಧಿಯಲ್ಲಿ ಬಡವರ ಆರೋಗ್ಯ ರಕ್ಷಣೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುನ್ನುಡಿ ಬರೆದರು.

ಉಚಿತ ಆರೋಗ್ಯ ಶಿಬಿರದಲ್ಲಿ ಸಕ್ಕರೆ ಖಾಯಿಲೆ,ಬಿ.ಪಿ.ಮತ್ತು ಇ.ಸಿ.ಜಿ.ಏಕೋ ಮತ್ತು ನೇತ್ರಾ ತಪಾಸಣೆ ಹಾಗೂ ಉಚಿತವಾಗಿ ಔಷಧಿ ವಿತರಣೆ ಮತ್ತು ಕನ್ನಡಕ ಮಾಡಲಾಗುತ್ತಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಪರಿಸರ ರಾಮಕೃಷ್ಣ, ಸುಧೀಂದ್ರ, ನಟರಾಜ್ ರವರು ಭಾಗವಹಿಸಿದ್ದರು. ಉಚಿತ ಆರೋಗ್ಯ ತಪಾಸಣೆ 700ಕ್ಕೂ ಜನರು ತಪಾಸಣೆಗೆ ಒಳಗಾದರು.

RELATED ARTICLES
- Advertisment -
Google search engine

Most Popular

Recent Comments