Tuesday, June 6, 2023
Homeಉದ್ಯೋಗಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳಿಗಾಗಿ ಅನುಪಾಲನಾ ಗೃಹ ಆರಂಭಿಸಲು ಆಸಕ್ತ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ರೀತಿಯ ಸಂಕಷ್ಟಕ್ಕೆ ಒಳಗಾಗಿ ಪಾಲನೆ ಮತ್ತು ರಕ್ಷಣೆಗಾಗಿ ಮಕ್ಕಳ ಪಾಲನಾ ಸಂಸ್ಥೆಗಳಿಂದ ಬಿಡುಗಡೆ ಹೊಂದುವ ಮಕ್ಕಳಿಗೆ 21 ವರ್ಷ ತುಂಬುವವರೆಗೆ ಅಥವಾ ವಿಶೇಷ ಸಂದರ್ಭಗಳಲ್ಲಿ ಹೆಚ್ಚುವರಿಯಾಗಿ 2 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮತ್ತು ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಪ್ರಯೋಗಿಕವಾಗಿ ಅನುಪಾಲನಾ ಗೃಹ ಪ್ರಾರಂಭಿಸಲು ಆಸಕ್ತರು ಜನವರಿ 4 2023 ರೊಳಗೆ ಅರ್ಜಿ ಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ಜಿಲ್ಲಾ ಕಚೇರಿ, ಎಂ.ಹೆಚ್. ಮರಿಗೌಡ ರಸ್ತೆ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು ಅಥವಾ ಕಚೇರಿ ಇ-ಮೇಲ್ dcpoblor@gmail.com ಅಥವಾ ದೂರವಾಣಿ: 080-29523458, 8277543415 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

RELATED ARTICLES
- Advertisment -
Google search engine

Most Popular

Recent Comments