Tuesday, June 6, 2023
Homeದೇಶಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳಕ್ಕೂ ಕ್ರಮ- ಸಿಎಂ ಬೊಮ್ಮಾಯಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳಕ್ಕೂ ಕ್ರಮ- ಸಿಎಂ ಬೊಮ್ಮಾಯಿ

ವಿಜಯಪುರ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿರುವ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪತ್ರಕರ್ತರು ಅಖಂಡ ಕರ್ನಾಟಕದ ಪತ್ರಕರ್ತರಾಗಬೇಕು. ಪತ್ರಿಕೆ ಇರಲಿಲ್ಲ ನಾವು ಇರುತ್ತಿರಲಿಲ್ಲ. ರಾಜಕಾರಣಿಗಳು ಇಲ್ಲ ಅಂದಿದ್ರೆ ಪತ್ರಕರ್ತರು ಇರುತ್ತಿರಲಿಲ್ಲ. ಪತ್ರಕರ್ತರು ಮತ್ತು ರಾಜಕಾರಣಿಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದರು.

ಪತ್ರಕರ್ತರ ಸಂಘ ಗುರುತಿಸಿದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಪತ್ರಕರ್ತರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಹೈಬ್ರೀಡ್ ಕಾಲದಲ್ಲೂ ವಿಜಯಪುರ ಜೋಳ ಶ್ರೇಷ್ಟ. ವಿಜಯಪುರ ಇಡೀ ದೇಶಕ್ಕೆ ಅನ್ನ ನೀಡುತ್ತದೆ. ನನ್ನನ್ನು ನಾಡದೊರೆ ಎನ್ನಬೇಡಿ ನಾಡದೋರೆ ಎಂದರೆ ನನಗೆ ಮುಜುಗರವಾಗುತ್ತೆ ಅದಕ್ಕೆ ಬ್ರೇಕ್ ಹಾಕಿ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments