ಹೊಸಕೋಟೆ: ಕಾಲೇಜು ವಿದ್ಯಾರ್ಥಿಗಳಿಂದ ಮತದಾನ ಜಾಥಾ ಜಾಗೃತಿ ಕಾರ್ಯಕ್ರಮ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 05 (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಹೊಸಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ಇಂದು ಹೊಸಕೋಟೆ ನಗರ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾದ ವತಿಯಿಂದ ಮತದಾನ ಜಾಗೃತಿ ಕುರಿತ ಜಾಥಾ ಕಾರ್ಯಕ್ರಮಕ್ಕೆ ಹಮ್ಮಿಕೊಂಡಿದ್ದು ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಚಂದ್ರಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಮತದಾನ ಕುರಿತ ಸ್ಲೋಗನ್‌ಗಳನ್ನು ಕೂಗುವ ಮೂಲಕ ನಗರದ ಕಾಲೇಜು ರಸ್ತೆ, ವಿವೇಕಾನಂದ ರಸ್ತೆ, ಹಾಗೂ ಗಂಗಮ್ಮನ ಗುಡಿ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಿದರು ಹಾಗೂ ವಿವೇಕಾನಂದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆಯನ್ನು ಕೂಗಿದರು.
ಈ ಸಂದರ್ಭದಲ್ಲಿ ಹೊಸಕೋಟೆ ನಗರಸಭೆ ಆಯುಕ್ತರು, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.
ಕಾಲೇಜು ವಿದ್ಯಾರ್ಥಿಗಳಿಂದ ಮತದಾನ ಜಾಥಾ ಜಾಗೃತಿ
RELATED ARTICLES