ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಬಿಜೆಪಿ ಮತ್ತು ಜಿಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ನೂರಾರು ಕಾರ್ಯಕರ್ತರುಗಳು ಸೇರ್ಪಡೆ ಸಮಾರಂಭ.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು, ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿ, ರಾಜಾಜಿನಗರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜುರವರು,ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಗೌಡರವರು,ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಬಿ.ಟಿ.ಶ್ರೀನಿವಾಸಮೂರ್ತಿ,
ಕೃಷ್ಣಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎಂ.ಆನಂದ್, ವಿ.ಎಸ್.ಆರಾಧ್ಯ, ಶಂಶೀರ್ ಬೇಗ್ ,ಶಿವಕುಮಾರ್ ,ಕುಮಾರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪರಿಸರ ರಾಮಕೃಷ್ಣ, ಸುಧೀಂದ್ರ, ನಟರಾಜ್ ರವರು ಪಾಲ್ಗೊಂಡಿದ್ದರು.