ಸುರಪುರ : ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ್ (ರಾಜುಗೌಡ) ಉಮೇದುವಾರು ಸಲ್ಲಿಕೆ.*
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ನರಸಿಂಹ ನಾಯಕ್ (ರಾಜುಗೌಡ) ಅವರು ಸೋಮವಾರದಂದು ನಗರದ ಮಿನಿ ವಿಧಾನಸೌಧದ ಕಾರ್ಯಾಲಯದಲ್ಲಿ ಚುನಾವಣಾ ಅಧಿಕಾರಿ ಅಂಬ್ರೇಶ್ ನಾಯಕ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸದಸ್ಯ ರಾಜಾ ಅಮರೇಶ ನಾಯಕ, ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಗದ್ದೆಪ್ಪ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ ಉಪಸ್ಥಿತರಿದ್ದರು.