ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಿನಾಂಕ 21.4.2023 ರಂದು ಚುನಾವಣೆ-ಪತ್ರಕರ್ತರು ಮತ್ತು ಸಾಮಾಜಿಕ ಜವಾಬ್ದಾರಿ ಬಗ್ಗೆ
ಕೆಯುಡಬ್ಲ್ಯೂಜೆ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ
ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ಚರ್ಚೆ ನಡೆಯಲಿದೆ.
ಕಾರ್ಯಕ್ರಮವು ಕೆಯುಡಬ್ಲ್ಯೂಜೆ ಸಭಾಂಗಣ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು. ಇಲ್ಲಿ ಏ.21 ರಂದು ಶುಕ್ರವಾರ ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಅಂದು ಕಾರ್ಯಕ್ರಮವನ್ನು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಕೆ.ರವಿ ಉದ್ಘಾಟಿಸಲಿದ್ದು, ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರು ಪ್ರಧಾನ ಭಾಷಣ ಮಾಡುವರು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ
ಮುಖ್ಯ ಅತಿಥಿಗಳಾಗಿ ವಾರ್ತಾ ಇಲಾಖೆ ನಿರ್ದೇಶಕರಾದ ಡಿ.ಪಿ.ಮುರುಳೀದರ್,
ಉಪ ನಿರ್ದೇಶಕರಾದ ಕೆ.ಪಿ.ಪುಟ್ಟಸ್ವಾಮಯ್ಯ ಅವರು ಭಾಗವಹಿಸುವರು ಎಂದು ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ತಿಳಿಸಿದ್ದಾರೆ.
ಕೆಯುಡಬ್ಲ್ಯೂಜೆ ಸಂವಾದ ಕಾರ್ಯಕ್ರಮ ಸರಣಿ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.